
ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಶೀಘ್ರವೇ ಗುರುತಿನ ಚೀಟಿ ವಿತರಿಸಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಲ್ಲಿ ಸಮೀಕ್ಷೆಯ ಮೂಲಕ ಗುರುತಿಸಲಾದ ಬಿದಿಬದಿ ವ್ಯಾಪಾರಿಗಳಿಗೆ ಶೀಘ್ರವೇ ಗುರುತಿನ ಚೀಟಿ ವಿತರಿಸಲು ತಿಳಿಸಿದ್ದಾರೆ.
ಸಮೀಕ್ಷೆಯ ಮೂಲಕ 27,655 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಕಾಲಮಿತಿಯೊಳಗೆ ಗುರುತಿನ ಚೀಟಿ ವಿತರಿಸಬೇಕು. ನಂತರ ಅವರಿಗೆ ನಿಗದಿಪಡಿಸಲಾದ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಸೂಚಿಸಿ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.
ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ.ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೊಟ್ ಉಪಸ್ಥಿತರಿದ್ದರು.