alex Certify ಬೆಂಗಳೂರಲ್ಲಿ ಘೋರ ದುರಂತ: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಸವಾರ ಸಾವು: ಇಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಘೋರ ದುರಂತ: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಸವಾರ ಸಾವು: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಂಗೇರಿ ಸಮಿಪದ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ನಡೆದಿದೆ.

ಸದ್ದಾಂ ಪಾಷಾ(20) ಮೃತಪಟ್ಟವರು. ಉಮ್ರಾನ್ ಪಾಷಾ ಮತ್ತು ಮುಬಾರಕ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಲಮಂಡಳಿ ಸಿಬ್ಬಂದಿ ಪೈಪ್ ಅಳವಡಿಸಲು ಗುಂಡಿ ತೋಡಿದ್ದರು, ರಾತ್ರಿ ವೇಳೆ ವೇಗವಾಗಿ ಬಂದಿದ್ದರಿಂದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಗುಂಡಿಗೆ ಬಿದ್ದು ಸ್ಥಳದಲ್ಲೇ ಸವಾರ ಮೃತಪಟ್ಟಿದ್ದಾರೆ. ಜಲ ಮಂಡಳಿ ಅಧಿಕಾರಗಳ ವಿರುದ್ಧ ಮೃತನ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೆಂಗೇರಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಮಧ್ಯೆ ಅಗೆದಿದ್ದ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕ ಸದ್ದಾಂ ಪಾಷಾ ಸಂಬಂಧಿಕರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ನಡೆದ ಬಳಿಕ ಬ್ಯಾರಿಕೇಡ್ ಆಳವಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಯುವಕನ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...