ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಐಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ ಚಂದ್ರು(10) ಮತ್ತು ಸುಪ್ರೀತ್(12) ಸ್ಥಿತಿ ಗಂಭೀರವಾಗಿದೆ.
ಪಾರಿವಾಳ ಹಿಡಿಯಲು ಇಬ್ಬರು ಪ್ರಯತ್ನಿಸಿ ಕಬ್ಬಿಣದ ರಾಡ್ ನಿಂದ ಹೊಡೆದಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿದೆ. ಶಾಕ್ ನಿಂದ ಮಕ್ಕಳ ಮೈಯೆಲ್ಲಾ ಸುಟ್ಟ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.