alex Certify BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 6 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈನಡುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಭ್ಉವನ್ ರೆಡ್ಡಿ ಹಾಗೂ ಗುತ್ತಿಗೆದಾರರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.

ಕಟ್ಟಡ ಮಾಲೀಕ ಭುವನ್ ರೆಡ್ಡಿ 4 ಅಂತಸ್ತಗಳನ್ನು ಕಟ್ಟಲು ಮಾತ್ರ ಅನುಮತಿ ಪಡೆದಿದ್ದರು. ಆದರೆ 6 ಅಂತಸ್ತಗಳನ್ನು ನಿರ್ಮಾಣ ಮಾಡಲಾಗಿತ್ತು. ಅವೈಜ್ಞಾನಿಕ ಕಟ್ಟಡ ನಿರ್ಮಾಣದಿಂದಾಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...