ಬೆಂಗಳೂರು : 110 ಹಳ್ಳಿಗಳಿಗೆ ನೀರು ಒದಗಿಸುವ 5ನೇ ಹಂತದ ಯೋಜನೆ ಕೆಲಸ ತ್ವರಿತವಾಗಿ ನಡೆಯುತ್ತಿದ್ದು, ಮೇ 15ರಿಂದ ನೀರು ನೀಡಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಈ ಯೋಜನೆಯೊಂದಿಗೆ ಬೆಂಗಳೂರು ನಗರಕ್ಕೆ 2,225 ಎಂಎಲ್ಡಿ ನೀರು ಬರಲಿದೆ. ಇನ್ನು 6ನೇ ಹಂತದ ಯೋಜನೆಗೆ ಡಿಪಿಆರ್ ಸಿದ್ಧವಾಗುತ್ತಿದ್ದು, ಈ ಯೋಜನೆಯಿಂದ ನಗರಕ್ಕೆ ತಿಂಗಳಿಗೆ 6 ಟಿಎಂಸಿ ನೀರು ಸಿಗಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ತುರ್ತು ಹಾಗೂ ದೀರ್ಘಕಾಲದ ಕ್ರಮಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಬೆಳ್ಳಂದೂರು, ವರ್ತೂರು ಕೆರೆಗಳು ಬರಿದಾಗಿರುವುದರಿಂದ ಆ ಪ್ರದೇಶಗಳಲ್ಲಿ ಅಂತರ್ಜಲ ಕಡಿಮೆಯಾಗಿದೆ. 1,300 ಎಂಎಲ್ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ. ಪ್ರಾರಂಭದಲ್ಲಿ ನಾಯಂಡಹಳ್ಳಿ ಕೆರೆ, ಚಿಕ್ಕಬಾಣವಾರ ಕೆರೆ, ವರ್ತೂರು ಕೆರೆ, ಅಗರ ಕೆರೆ ಸೇರಿದಂತೆ ಆರು ಕೆರೆಗಳನ್ನು ತುಂಬಿಸಲಾಗುವುದು. ಅಲ್ಲದೇ, ಕೆರೆಗಳ ಪಕ್ಕದಲ್ಲಿಯೇ ಫಿಲ್ಟರ್ ಬೋರ್ವೆಲ್ಗಳನ್ನು ಕೊರೆದು, ಸಂಸ್ಕರಣೆ ಘಟಕ ಅಳವಡಿಸಿ, ಸುಮಾರು 10 ರಿಂದ 20 ಎಂಎಲ್ಡಿ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ರಿಯಾಯಿತಿ ದರದಲ್ಲಿ ಸಂಪ್ಗಳಿಗೆ ಮತ್ತು ಅನ್ಯ ಉದ್ದೇಶಗಳಿಗೆ ಸಂಸ್ಕರಿಸಿದ ನೀರನ್ನು ನೀಡಲಿದ್ದು, ಟ್ಯಾಂಕರ್ಗೆ ತುಂಬಿಸಿಕೊಂಡು ಹೋಗಬಹುದು. ಇದಕ್ಕಾಗಿ ಮೊಬೈಲ್ ತಂತ್ರಾಂಶವನ್ನು ರೂಪಿಸಲಾಗುತ್ತಿದ್ದು, ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ.