alex Certify BREAKING : ಬೆಂಗಳೂರಲ್ಲಿ ‘ಅಂದರ್ ಬಾಹರ್’ ಜೂಜಾಟದ ಮೇಲೆ ‘CCB’ ದಾಳಿ, 86 ಲಕ್ಷಕ್ಕೂ ಹೆಚ್ಚು ಹಣ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘ಅಂದರ್ ಬಾಹರ್’ ಜೂಜಾಟದ ಮೇಲೆ ‘CCB’ ದಾಳಿ, 86 ಲಕ್ಷಕ್ಕೂ ಹೆಚ್ಚು ಹಣ ಜಪ್ತಿ

ಜೂಜಾಟದ ಮೇಲೆ ಸಿಸಿಬಿ ದಾಳಿ ನಡೆಸಿ 86 ಲಕ್ಷಕ್ಕೂ ಹೆಚ್ಚು ಹಣ ಜಪ್ತಿ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಂದರ್ ಬಾಹರ್ ಆಡುತ್ತಿದ್ದ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ದಾಖಲೆ ಇಲ್ಲದ 86 ಲಕ್ಷಕ್ಕೂ ಹೆಚ್ಚು ಹಣವನ್ನು ಜಪ್ತಿ ಮಾಡಿಕೊಂಡು ಆರು ಮಂದಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ದಾಳಿ ನಡೆಸಿದ್ದು, ಸುಮಾರು 86, 87,800 ರೂ ದಾಖಲೆ ಇಲ್ಲದ ಹಣ ಜಪ್ತಿ ಮಾಡಿಕೊಂಡಿದ್ದಾರೆ. ಸದ್ಯ, ಆರು ಮಂದಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...