
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95 ರಷ್ಟು ಇದೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇಕಡ 7.5 ರಷ್ಟು ಇದೆ. ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 1,27,194 ಕೋವಿಡ್ ಪರೀಕ್ಷೆ ಮಾಡಲಾಗಿದೆ.