alex Certify ರಾಜ್ಯದಲ್ಲಿಂದು 356 ಜನರಿಗೆ ಸೋಂಕು ದೃಢ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 356 ಜನರಿಗೆ ಸೋಂಕು ದೃಢ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 356 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 347 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 30,05,232 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,318 ಜನ ಸೋಂಕಿತರು ಮೃತಪಟ್ಟಿದ್ದಾರೆ. 29,59,429 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7456 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.50 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 269 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಬ್ಬರು ಮೃತಪಟ್ಟಿದ್ದು, 209 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6122 ಸಕ್ರಿಯ ಪ್ರಕರಣಗಳು ಇವೆ.

ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 269, ದಕ್ಷಿಣಕನ್ನಡ 10, ಮೈಸೂರು 10, ಉಡುಪಿ 20 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ ಮತ್ತು ಹಾಸನದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...