ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1894 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 5418 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ 23,284 ಸಕ್ರಿಯ ಪ್ರಕರಣಗಳಿವೆ. 24 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 99,516 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 1.90 ರಷ್ಟು ಇದೆ.
ಬೆಂಗಳೂರಿನಲ್ಲಿ ಇಂದು 835 ಜನರಿಗೆ ಸೋಂಕು ತಗುಲಿದ್ದು, 10 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.