ಬೆಂಗಳೂರು: ದೇಶಾದ್ಯಂತ ಕೊರೋನಾ ಎರಡನೆಯ ಅಲೆ ಅಬ್ಬರ ಆತಂಕವನ್ನುಂಟು ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಸಾವಿನ ಸಂಖ್ಯೆಯಲ್ಲಿಯೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಆತಂಕ ತಂದಿದೆ.
ದಿನದಿಂದ ದಿನಕ್ಕೆ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದಾರೆ. ನಿನ್ನೆ ಒಂದೇ ದಿನ 55 ಜನ ಸೋಂಕಿತರು ಮೃತಪಟ್ಟಿದ್ದಾರೆ. ಏಪ್ರಿಲ್ 2 ರಂದು ಐವರು ಹಾಗೂ ಏಪ್ರಿಲ್ 3 ರಂದು 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಏಪ್ರಿಲ್ 7 ರಂದು 25, ಏಪ್ರಿಲ್ 8 ರಂದು 22, ಏಪ್ರಿಲ್ 9 ರಂದು 29, ಏಪ್ರಿಲ್ 10 ರಂದು 19, ಏಪ್ರಿಲ್ 11 ರಂದು 27 ಜನ ಸೋಂಕಿತರು ಮೃತಪಟ್ಟಿದ್ದಾರೆ. ಏಪ್ರಿಲ್ 12 ರಂದು 40, ಏಪ್ರಿಲ್ 13 ರಂದು 55 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 4910 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ತೀವ್ರ ಏರಿಕೆಯಾಗಿದೆ. 57,575 ಸಕ್ರಿಯ ಪ್ರಕರಣಗಳಿವೆ.