ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 48 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು ಒಂದೇ ದಿನ 48,781 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಒಟ್ಟು ಸೋಂಕಿತರ ಸಂಖ್ಯೆ 18,38,885 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ದಾಖಲೆಯ 592 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17,804 ಕ್ಕೆ ಏರಿಕೆಯಾಗಿದೆ.
ಇವತ್ತು 28,623 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 12,84,420 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಬರೋಬ್ಬರಿ 5,36,641 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 21,376 ಜನರಿಗೆ ಸೋಂಕು ತಗಲಿದ್ದು, ಇವತ್ತು ಒಂದೇ ದಿನ 346 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 3,41,978 ಸಕ್ರಿಯ ಪ್ರಕರಣಗಳು ಇವೆ.