alex Certify BIG BREAKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ, 4234 ಮಂದಿಗೆ ಸೋಂಕು -10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ, 4234 ಮಂದಿಗೆ ಸೋಂಕು -10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 4234 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇವತ್ತು ಒಂದೇ ದಿನ 18 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,585 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10,01,238 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1599 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,57,769 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ 30,865 ಸಕ್ರಿಯ ಪ್ರಕರಣಗಳು ಇದ್ದು, 265 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಪೋಟವಾಗಿದೆ. ಇವತ್ತು ಒಂದೇ ದಿನ 2906 ಜನರಿಗೆ ಸೋಂಕು ತಗಲಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ  21,789 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...