
ಬೆಂಗಳೂರು: ರಾಜ್ಯದಲ್ಲಿ ಇಂದು 7810 ಜನರಿಗೆ ಕೊರೊನಾ ಸೋಂಕು ತಗಲಿದ್ದು, 125 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,65,134 ಕ್ಕೆ ಏರಿಕೆಯಾಗಿದೆ.
ಇಂದು 18,648 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,51,365 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,80,835 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ 32,913 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ 1348 ಜನರಿಗೆ ಸೋಂಕು ತಗಲಿದ್ದು, 23 ಸೋಂಕಿತರು ಮೃತಪಟ್ಟಿದ್ದಾರೆ. 4125 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 85,995 ಸಕ್ರಿಯ ಪ್ರಕರಣಗಳಿವೆ.

