alex Certify ರಾಜ್ಯದಲ್ಲಿಂದು ಹೊಸದಾಗಿ 761 ಜನರಿಗೆ ಸೋಂಕು, 7 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಹೊಸದಾಗಿ 761 ಜನರಿಗೆ ಸೋಂಕು, 7 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 761 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,24,898 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ ರಾಜ್ಯದಲ್ಲಿ 7 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 12,131 ಜನ ಸೋಂಕಿತರು ಮೃತಪಟ್ಟಿದ್ದಾರೆ. 9,03,629 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 9119 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 399 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,91,184 ಕ್ಕೆ ಏರಿಕೆಯಾಗಿದೆ. ಇದುವರೆಗೆ 3,81,220 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5622 ಸಕ್ರಿಯ ಪ್ರಕರಣಗಳಿದ್ದು, ಇಂದು ಐವರು ಸಾವನ್ನಪ್ಪಿದ್ದಾರೆ. 4141 ಜನ ಸೋಂಕಿತರು ಇದುವರೆಗೆ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...