
ಬೆಂಗಳೂರು: ರಾಜ್ಯದಲ್ಲಿ ಇಂದು 2016 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,57,928 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 17 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,491 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 8,18,392 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 28,026 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಕೂಡ ಕೊರೋನಾ ಸೋಂಕು ಇಳಿಮುಖವಾಗಿದ್ದು, 1030 ಜನರಿಗೆ ಇಂದು ಸೋಂಕು ತಗುಲಿರುವುದು ದೃಢಪಟ್ಟಿದೆ. ಮೂವರು ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಬೆಂಗಳೂರಿನಲ್ಲಿ 3,988 ಮಂದಿ ಮೃತಪಟ್ಟಿದ್ದಾರೆ. 3,33,487 ಜನ ಇದುವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 17,759 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.