alex Certify BIG NEWS: ರಾಜ್ಯದಲ್ಲಿ 5501 ಕೊರೋನಾ ಸೋಂಕಿತರಿಗೆ ಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 5501 ಕೊರೋನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 571 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,50,207 ಕ್ಕೆ ಏರಿಕೆಯಾಗಿದೆ.

ಇಂದು 4 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,320 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 642 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,32,367 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5501 ಜನರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 121 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 368 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,04,996 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 498 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,96,772 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ, 3754 ಸಕ್ರಿಯ ಪ್ರಕರಣಗಳಿವೆ. ಇವತ್ತು ಬೆಂಗಳೂರಿನಲ್ಲಿ 3 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4469 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...