alex Certify BIG NEWS: ಕೊರೊನಾ ಆತಂಕ; ಖಾಸಗಿ ಶಾಲೆಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಆತಂಕ; ಖಾಸಗಿ ಶಾಲೆಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆತಂಕ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗುವ ಮುನ್ನವೇ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಖಾಸಗಿ ಶಾಲೆಗಳಲ್ಲಿ ಮಕ್ಕಳು, ಶಿಕ್ಷಕರು, ಸಿಬ್ಬಂದಿಗಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಖಾಸಗಿ ಶಾಲಾ ಒಕ್ಕೂಟ ಸೂಚನೆ ನೀಡಿದೆ. ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಪಾಲನೆ, ನೆಗಡಿ, ಕೆಮ್ಮು, ಜ್ವರ ಬಂದರೆ ತಕ್ಷಣ ಕೋವಿಡ್ ಟೆಸ್ಟ್ ಗೆ ಒಳಗಾಗುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...