ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿದು ಅನೇಕರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯಗಳಾಗಿವೆ.
ನಾಲ್ವರು ಮಕ್ಕಳು ಸೇರಿದಂತೆ 26 ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿವೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಮಂದಿಗೆ ಗಂಭೀರ ಗಾಯವಾಗಿವೆ.