ಬೆಂಗಳೂರಿನ ಯಲಹಂಕ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದ ಕಾರಣ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ. ಯಲಹಂಕ ನ್ಯೂಟೌನ್ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.
ತಡ ರಾತ್ರಿ 12.30 ಕ್ಕೆ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿದ್ದು, ಇದರಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ 15 ಮಂದಿಗೆ ಆಕ್ಸಿಜನ್ ಪೂರೈಕೆ ಮಾಡಲಾಗ್ತಿತ್ತು. ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆನ್ನಲಾಗಿದೆ.
ನಂತರದಲ್ಲಿ ಸೋನು ಸೂದ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಕ್ಸಿಜನ್ ಪೂರೈಕೆ ಮಾಡಲಾಗಿದೆ. ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.