ಬೆಂಗಳೂರು: ಬೆಂಗಳೂರಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಹಾಗೂ ಟಿ ಆರ್ ಎಸ್ ಶಾಸಕರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.
ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್ ಹಾಗೂ ಟಿ ಆರ್ ಎಸ್ ಶಾಸಕ ರೋಹಿತ್ ರೆಡ್ಡಿ ಅವರಿಗೆ ಇಡಿ ನೋಟೀಸ್ ನೀಡಿದೆ.
ಡಿಸೆಂಬರ್ 19ರಂದು ಹೈದರಾಬಾದ್ ನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನಲ್ಲಿ ತಿಳಿಸಲಾಗಿದೆ.