ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ 8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುವ ಬೆಸ್ಕಾಂ ಭಾರಿ ಪ್ರಮಾಣದ ದಂಡ ವಸೂಲಿ ಮಾಡಿದೆ.
8000ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣವನ್ನು ದಾಖಲಿಸಿಕೊಂಡಿರುವ ಬೆಸ್ಕಾಂ, 33 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದೆ.
ಇತ್ತೀಚೆಗಷ್ಟೇ ದೀಪಾವಳಿಯಲ್ಲಿ ಮನೆಯ ದಿಪಾಲಂಕಾರಕ್ಕಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿರುವುದಕ್ಕೆ 68 ಸಾವಿರಕ್ಕೂ ಹೆಚ್ಚು ದಂಡ ವಿಧಿಸಿದ ಘಟನೆ ನಡೆದಿತ್ತು. ಈ ಪ್ರಕರಣದ ಬೆನ್ನಲ್ಲೇ ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರಿನಲ್ಲಿ 8 ಸಾವಿರಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.
ವಿದ್ಯುತ್ ಕಳ್ಳತನದ ಅಡಿಯಲ್ಲಿ ಬಿಲ್ ಬಾಕಿ ಪ್ರಕರಣಗಳು, ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳು ಎಂಬ ಎರಡು ರೀತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಬಿಸಿಗಳ ಮೂಲಕ ಸಂಗ್ರಹಿಸಲಾದ ದಂಡವು ಬೆಸ್ಕಾಂಗೆ ಹೋದರೆ ಉಳಿದ ಪ್ರಕರಣಗಳ ದಂಡದ ಮೊತ್ತ ಸರ್ಕಾರಕ್ಕೆ ಹೋಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.