ಬೆಂಗಳೂರು: ಲೋಕಾಯುಕ್ತ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂದು ಗುರುತಿಸಲಾಗಿದೆ. ಸರ್ಕಾರಿ ಅಧಿಕಾರಿ ರಾಮದಾಸ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಎಂಬ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಕರೆದು ಅವರಿಂದ ಹಣ ಸುಲಿಗೆ ಮಾಡುತ್ತಿದ್ದ ವಂಚಕನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಅಧಿಕಾರಿಯೊಬ್ಬರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಆರೋಪಿ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಂದ ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಈತ ಚಲನಚಿತ್ರದಿಂದ ಸ್ಫೂರ್ತಿ ಪಡೆದ ನಂತರ ಇಂತಹ ಕೃತ್ಯಕ್ಕೆ ಕೈ ಹಾಕಿದ್ದನು ಎಂದು ಹೇಳಿದ್ದಾರೆ. ತೆಲುಗು ಚಿತ್ರವೊಂದರಿಂದ ಪ್ರೇರಿತನಾಗಿ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಲು ಆರಂಭಿಸಿದ್ದ’ ಎಂದು ಬಿ.ದಯಾನಂದ ತಿಳಿಸಿದರು.