ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.
ನಡೆದಿದೆ.
ಲತಾ (30) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಕಾಂತರಾಜುನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪತಿ ಕಾಂತರಾಜು ದಿವ್ಯಾ ಎಂಬ ಮಹಿಳೆ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಈ ವಿಚಾರ ಪತ್ನಿಗೆ ತಿಳಿದು ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಪತ್ನಿ ಲತಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.