
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಹೊತ್ತಿ ಉರಿದ ಘಟನೆ ಕುಂಬಳಗೋಡು ಬಳಿ ನಡೆದಿದೆ.
ಕುಂಬಳಗೋಡಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಧಗ ಧಗನೆ ಹೊತ್ತಿ ಉರಿದಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.