
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾಕ್ರಮವಾಗಿ ಎಲ್ಲಾ ಅಪಾರ್ಟ್ ಮೆಂಟ್, ಹೋಟೆಲ್, ರೆಸ್ಟೋ ರೆಂಟ್, ಅಂಗಡಿಗಳನ್ನು ಪರಿಶೀಲನೆ ನಡೆಸುವಂತೆ ಅಗ್ನಿಶಾಮಕ ಇಲಾಖೆ ಡಿಜಿ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಬೆಂಗಳೂರಿನ ವಿಜಯನಗರ, ಚಾಮರಾಜಪೇಟೆ, ಲಗ್ಗೆರೆ, ಅತ್ತಿಬೆಲೆ, ಕೋರಮಂಗಲ ಸೇರಿದಂತೆ ಹಲವೆಡೆ ಬೆಂಕಿ ದುರಂತ ಸಂಭವಿಸಿತ್ತು. ಅತ್ತಿಬೆಲೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 17 ಜನರು ಸಾವನ್ನಪ್ಪಿದ್ದಾರೆ. ಈ ಗಟನೆ ಬೆನ್ನಲ್ಲೇ ನಿನ್ನೆ ಕೋರಮಂಗಲದ ಮಡ್ ಪೈಪ್ ಪಬ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಲ್ಲಿ ಬೃಹತ್ ಮಳಿಗೆಗಳು, ಹೋಟೆಲ್, ರೆಸ್ಟೋರೆಂಟ್, ಅಂಗಡಿಗಳಲ್ಲಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಕಮಲ್ ಪಂತ್ ಮೌಖಿಕ ಆದೇಶ ನೀಡಿದ್ದಾರೆ.
ಸುರಕ್ಷತಾ ಕ್ರಮ ಕೈಗೊಳ್ಳದ ನಿಯಮ ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.