
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಬೆಂಗಳೂರಿನ ಮನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ.
ನಾಗವಾರದ ಸಾರಾಯಿಪಾಳ್ಯದಲ್ಲಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.