
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮು ಮತ್ತು ಪಕ್ಕದ ಶೆಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮ ಪಕ್ಕದ ಜಾಗದಲ್ಲಿ ನಿಲ್ಲಿಸಿದ್ದ ಆಟೋಗಳು ಬೆಂಕಿಗಾಹುತಿಯಾಗಿವೆ.
ನಾಯಂಡಹಳ್ಳಿ ಸಮೀಪ ಗಂಗೊಂಡನಹಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದೆ. ಶೆಡ್ ನಲ್ಲಿ ಪಾರ್ಕಿಂಗ್ ಶುಲ್ಕ ನೀಡಿ ಚಾಲಕರು ಆಟೋ ನಿಲ್ಲಿಸಿದ್ದರು. ರಿಜ್ವಾನ್ ಎಂಬುವರಿಗೆ ಸೇರಿದ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಲ್ಲಿ ಸುಮಾರು 40 ರಿಂದ 50 ಆಟೋಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.