alex Certify BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ.

ಪೂಜಾ ಸಾಮಗ್ರಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿ ಘಟನೆ ನಡೆದಿದೆ. ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಸತೀಶ್ ಸ್ಟೋರ್ ಗೋದಾಮಿನಲ್ಲಿ ಬೆಂಕಿ ತಗುಲಿ ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ.

ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ರಾತ್ರಿ 11:30 ಕ್ಕೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...