
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ಉಳ್ಳಾಲ ಮುಖ್ಯರಸ್ತೆಯಲ್ಲಿರುವ ಸೆಂಟ್ರಿಂಗ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮರದ ಸೆಂಟ್ರಿಂಗ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಬೆಂಕಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಗೋಡೌನ್ ಮಾಲೀಕರು ಸ್ಥಳದಿಂದ ತೆರಳಿದ ನಂತರ ಘಟನೆ ಸಂಭವಿಸಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.