ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮಣಿಪಾಲ್ ಕಂಟ್ರಿ ರೋಡ್ ನಲ್ಲಿ ಟಿಂಬರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಕ್ಕದ ಕಟ್ಟಡಕ್ಕೂ ಬೆಂಕಿ ವ್ಯಾಪಿಸಿದ್ದು ಸುಮಾರು 5 ಕೋಟಿಗೂ ಅಧಿಕ ಮೌಲ್ಯದ ಬಟ್ಟೆ ಇತರೆ ವಸ್ತುಗಳು ಸುಟ್ಟು ಹೋಗಿವೆ.
ಕಟ್ಟಿಗೆ ಸ್ಟೋರ್ ಮಾಡಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಭಾರಿ ಪ್ರಮಾಣದಲ್ಲಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲಿದ್ದ ಕಾರ್ ಗಳು ಸುಟ್ಟು ಕರಕಲಾಗಿವೆ. ಪಕ್ಕದ ರೆಮೇಡ್ ಗಾರ್ಮೆಂಟ್ಸ್ ಕಟ್ಟಡದ 4ನೇ ಫ್ಲೋರ್ ನಲ್ಲಿ ಬ್ರಾಂಡೆಡ್ ಬಟ್ಟೆಗಳನ್ನು ಪ್ಯಾಕ್ ಮಾಡಿ ಇಡಲಾಗಿತ್ತು. ಅವುಗಳಿಗೂ ಬೆಂಕಿ ತಗುಲಿ 5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. 5 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.