alex Certify ಬೆಂಗಳೂರಲ್ಲಿ ಭಾರೀ ಬೆಂಕಿ ಅವಘಡ, ತಪ್ಪಿದ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಭಾರೀ ಬೆಂಕಿ ಅವಘಡ, ತಪ್ಪಿದ ಅನಾಹುತ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ನಾಲ್ಕು ಮಹಡಿಯ ಅಜಂತಾ ಟ್ರಿನಿಟಿ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರಿನಲ್ಲಿ ಟ್ರಿನಿಟಿ ಸರ್ಕಲ್ ಸಮೀಪ ಇರುವ ಹೋಟೆಲ್ ನಲ್ಲಿ ಬೆಂಕಿಯ ಕೆನ್ನಾಲಿಗೆಗೆ ಎರಡು ಮಹಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನೆಯ ಸಂದರ್ಭದಲ್ಲಿ ಹೋಟೆಲ್ ನಲ್ಲಿ ಸಿಲುಕಿದ್ದ 7 ಜನರನ್ನು ರಕ್ಷಿಸಲಾಗಿದೆ. ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೋಟೆಲ್ ನ ಪಾರ್ಕಿಂಗ್ ಸ್ಥಳದಲ್ಲಿದ್ದ ಆಟೋ, ಬೊಲೆರೋ ವಾಹನ ಸಂಪೂರ್ಣ ಸುಟ್ಟು ಕರಕಲಾಗಿವೆ. ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...