ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸ್ಪಾದಲ್ಲಿ ರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸತತ ಒಂದು ಗಂಟೆ ಕಾಲ ಹೊತ್ತಿ ಉರಿದಿದೆ.
ಭಾರೀ ಬೆಂಕಿಯ ಜ್ವಾಲೆಗೆ ಸ್ಪಾದದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.