
ಬೆಂಗಳೂರು: ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೋಲೀಸರು ಫೈರಿಂಗ್ ಮಾಡಿದ್ದು, ಕಾಲಿಗೆ ಗುಂಡು ಹಾರಿಸಿ ಆರೋಪಿ ಮೊಹಮ್ಮದ್ ಸಲೀಂ ಬಂಧಿಸಿದ್ದಾರೆ.
ಬೆಂಗಳೂರಿನ ಹೆಚ್.ಬಿ.ಆರ್. ಲೇಔಟ್ ನಲ್ಲಿ ಘಟನೆ ನಡೆದಿದೆ. ಎಸ್ಐ ಮೊಹಮ್ಮದ್ ಅಲಿ ಇಮ್ರಾನ್ ಅವರು ಫೈರಿಂಗ್ ಮಾಡಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮೊಹಮ್ಮದ್ ಅಲಿ ಇಮ್ರಾನ್ ಹಾಗೂ ಸಿಬ್ಬಂದಿ ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಿ ಯತ್ನಿಸಿದ್ದು, ಈ ವೇಳೆ ಶರಣಾಗಲು ಸೂಚಿಸಿ ಅಂತಿಮವಾಗಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.