alex Certify BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್: ಹೈವೇಯಲ್ಲಿ ರಾಬರಿ ಮಾಡ್ತಿದ್ದವನಿಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್: ಹೈವೇಯಲ್ಲಿ ರಾಬರಿ ಮಾಡ್ತಿದ್ದವನಿಗೆ ಗುಂಡೇಟು

ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ ಬಳಿಯ ಕೂಲಿನಗರ ಬ್ರಿಡ್ಜ್ ಬಳಿ ನಂದಿನಿ ಲೇಔಟ್ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನವೆಂಬರ್ 26 ರಂದು ರಿಂಗ್ ರಸ್ತೆ ಬಳಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿತ್ತು. ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ಚಾಲಕ ದೂರು ನೀಡಿದ್ದು ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಪೋಲಿಸರು ಬಂಧಿಸಿದ್ದರು.

ಇಂದು ಬೆಳಗ್ಗೆ ಅನುಬನ್ ನನ್ನು ಬಂಧಿಸಲು ತೆರಳಿದ್ದ ವೇಳೆ ಹೆಡ್ ಕಾನ್ ಸ್ಟೇಬಲ್ ಅಭಿಷೇಕ್ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಗುಂಡೇಟು ತಗುಲಿದ ಅನುಬನ್ ನನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...