ಬೆಂಗಳೂರು : ಕೆಇಎ (KEA) ಪರೀಕ್ಷಾರ್ಥಿಗಳಿಗೆ ಆಮ್ ಆದ್ಮಿ ಪಕ್ಷ ಬೆಂಗಳೂರಿನಲ್ಲಿ ಉಚಿತ ಆಟೋ ಪ್ರಯಾಣದ ವ್ಯವಸ್ಥೆ ಮಾಡಿದೆ.
ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕದಿಂದ ಉಚಿತ ಆಟೋ ಪ್ರಯಾಣ ಸೌಲಭ್ಯ ನೀಡಲಾಗಿದೆ.
ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ 50ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಉಚಿತ ಸೌಲಭ್ಯ ನೀಡಲಾಗುತ್ತದೆ.ಮೈಸೂರು ಸೇಲ್ಸ್ ಇಂಟನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಖಾಲಿ ಹುದ್ದೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳ ಹುದ್ದೆಗೆ ಕೆಇಎ ಪರೀಕ್ಷೆ ನಡೆಸುತ್ತಿದೆ.