ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದ ನಡುವೆ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ.
ಭಾರಿ ಮಳೆ ಅಬ್ಬರದ ನಡುವೆಯೇ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.