ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ನಾಳೆ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ಬೆಂಗಳೂರಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆ ಘೋಷಣೆ ಮಾಡಿದ್ದಾರೆ.