ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.
ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ನೀರು ಹೊರಹಾಕುವಲ್ಲಿ ಪರದಾಡುವಂತಾಗಿದೆ. ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ಹರಿದು ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು. ದಾಸರಹಳ್ಳಿ ಹೇರೋಹಳ್ಳಿ, ಜ್ಞಾನ ಭಾರತಿ ಮೊದಲಾದ ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಎರಡು ದಿನಗಳ ಬಿಡುವಿನ ನಂತರ ರಾತ್ರಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ.