alex Certify ಗಮನಿಸಿ…! ಸೆ. 6 ರವರೆಗೆ ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಸೆ. 6 ರವರೆಗೆ ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದಿನಿಂದ ಸೆಪ್ಟಂಬರ್ 6 ರವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಮಂಗಳವಾರದವರೆಗೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇಂದಿನಿಂದ 4 ದಿನಗಳ ಕಾಲ ಕಲ್ಬುರ್ಗಿ, ವಿಜಯಪುರ, ಗದಗ, ಧಾರವಾಡ, ಬೀದರ್, ಹಾವೇರಿ, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಕೋಲಾರ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೋಮವಾರದಿಂದ ಕೊಪ್ಪಳ, ಗದಗ, ರಾಯಚೂರು, ಯಾದಗಿರಿ, ಧಾರವಾಡ, ಬೆಳಗಾವಿ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು, ಚಾಮರಾಜನಗರ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸೆ. 6 ರವರೆಗೆ ಬಾರಿ ಮಳೆ ಮುಂದುವರೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...