ಬೆಂಗಳೂರು: ಬೆಂಗಳೂರಿನ ವಿವಿಧ ಶಾಲೆಗಳು, ಹೋಟೆಲ್ ಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶದ ಬಳಿಕ ಇದೀಗ ಬ್ಯಾಂಕ್ ಗಳಿಗೂ ಇಂತಹ ಬೆದರಿಕೆ ಕರೆಗಳು ಆರಂಭವಾಗಿವೆ. ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಹೆಚ್.ಎಸ್.ಬಿ.ಸಿ ಬ್ಯಾಂಕ್ ಗೆ ದುಷ್ಕರ್ಮಿಯೊಬ್ಬ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾನೆ.
ಎಂ.ಜಿ.ರಸ್ತೆಯಲ್ಲಿರುವ ಹೆಚ್.ಎಸ್.ಬಿ.ಸಿ ಬ್ಯಾಂಕ್ ಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಯೊಬ್ಬ ಇ-ಮೇಲ್ ರವಾನಿಸಿದ್ದು, ಅದರಲ್ಲಿ ಬ್ಯಾಂಕ್ ನಲ್ಲಿ ಬಾಂಬ್ ಇಟ್ಟಿದ್ದೇವೆ, ಸ್ಫೋಟವಾಗಲಿದೆ ಎಂದು ಸಂದೇಶ ಕಳುಹಿಸಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಬ್ಯಾಂಕ್ ಆಡಳಿತ ಮಂಡಳಿ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕೆ ಹಲಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.