ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 37 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಪ್ರಯಾಣಿಕನೋರ್ವ ಅಕ್ರಮ ಚಿನ್ನದೊಂದಿಗೆ ಶ್ರೀಲಂಕಾ ಏರ್ ಲೈನ್ಸ್ ಮೂಲಕ ಬೆಂಗಳೂರಿಗೆ ಬಂದಿದ್ದನು. ಈತ 37 ಲಕ್ಷ ಮೌಲ್ಯದ ಲಕ್ಷ ಮೌಲ್ಯದ 611 ಗ್ರಾಂ ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದನು. ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಪ್ರಯಾಣಿಕನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.