ಬೆಂಗಳೂರು : ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜ್ಯೂವೆಲರ್ಸ್ ಗಳ ಮೇಲೆ ಐಟಿ ದಾಳಿ ಮುಂದುವರೆದಿದೆ.
ಬೆಂಗಳೂರಿನ ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ನಡೆಸಿದಾಗ ಇಬ್ಬರು ಬಾಲ ಕಾರ್ಮಿಕರನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದೆ.
ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಲೆಕ್ಕಪತ್ರವನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 10 ಹಾಗೂ 9 ವರ್ಷದ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆಯಾಗಿದ್ದು, ಈ ಸಂಬಂಧ ಮಾಲೀಕ ಅಶೋಕ್ ಕುಮಾರ್, ಶ್ರೇಯಸ್ ಚೌಡರೆ ಮತ್ತು ಗೌರವ್ ಚೌಡರೆ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಆಭೂಷಣ್ ಜ್ಯುವೇಲರ್ಸ್ ನಲ್ಲಿ ಸತತ 4 ದಿನದಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.