ಬೆಂಗಳೂರು : ಕುಡಿಯುವ ನೀರು ಹಾಗೂ ಒಳಚರಂಡಿಗೆ ಸಂಬಂಧಿಸಿ ಕುಂದುಕೊರತೆಗಳ ನಿವಾರಣೆ ಸಂಬಂಧ ಜಲಮಂಡಳಿ ಅಧ್ಯಕ್ಷರೊಂದಿಗೆ ಮೇ 31ರ ಬೆಳಗ್ಗೆ 9.30 ರಿಂದ 10.30ರವರೆಗೆ ಫೋನ್- ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ಪ್ರದೇಶದಲ್ಲಿ ಕುಡಿಯುವ ನೀರು, ಒಳಚರಂಡಿ ಸಮಸ್ಯೆ, ಜಲಮಾಪನ ಹಾಗೂ ನೀರಿನ ಬಿಲ್ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನೇರವಾಗಿ ಅಧ್ಯಕ್ಷರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಸಾರ್ವಜನಿಕರು 080-22945119 ಮತ್ತು 22229639 ಗೆ ಸಂಪರ್ಕಿಸಿ, ಆರ್ಆರ್ ಸಂಖ್ಯೆ ತಿಳಿಸಿ ದೂರು ದಾಖಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.