alex Certify BIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ರೂಪಾಯಿ ಹಣ ಪತ್ತೆಯಾಗಿದೆ.

ಜಯನಗರದ 4ನೇ ಬ್ಲಾಕ್ ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ ಐಷಾರಾಮಿ ಕಾರಿನಲ್ಲಿ ಚೀಲದಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿದ್ದು, ಕಾರು ಹಾಗೂ ಹಣ ಯಾರದ್ದು? ಹಣದ ಬಗ್ಗೆ ಸೂಕ್ತ ದಾಖಲೆಗಳು ಇವೆಯೇ ಎಂಬ ಬಗ್ಗೆ ಪರುಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...