alex Certify BIG NEWS: ಮುಂದಿನ ಐದು ದಿನಗಳವರೆಗೆ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಐದು ದಿನಗಳವರೆಗೆ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಅಬ್ಬರಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಅ.22ರವರೆಗೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವೆಡೆ ಮಳೆ ಮುಂದುವರೆಯಲಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ಹಾಸನ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಲೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...