![](https://kannadadunia.com/wp-content/uploads/2021/04/kpsc-1591497904.jpg)
ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 28 ರಿಂದ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ(KPSC) ತಿಳಿಸಿದೆ.
ಫೆಬ್ರವರಿ 17 ರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 3 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 29ರಂದು ಪೂರ್ವಭಾವಿ ಮರು ಪರೀಕ್ಷೆ ನಡೆದಿತ್ತು. 1:15 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಫೆಬ್ರವರಿ 10ರಂದು ಪ್ರಕಟಿಸಲಾಗಿದೆ.
ಮಾರ್ಚ್ 28, 29 ಮತ್ತು ಏಪ್ರಿಲ್ 1, 2 ರಂದು ಮುಖ್ಯ ಪರೀಕ್ಷೆ ನಡೆಯಲಿದೆ. ಬೆಂಗಳೂರು ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.