
ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಹೆಗಡೆ ನಗರದ ಬಾಲಾಜಿ ಲೇಔಟ್ ನಲ್ಲಿ ಘಟನೆ ನಡೆದಿದೆ.
ಹೆಗಡೆ ನಗರದ ನಿವಾಸಿಯಾಗಿರುವ ಸಲ್ಮಾನ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ತಂದೆಯ ಫರ್ನಿಚರ್ ಅಂಗಡಿ, ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾನ್ ರಾತ್ರಿ 11 ಗಂಟೆಗೆ ಮನೆಗೆ ಹೋಗುತ್ತಿದ್ದರು
ಈ ವೇಳೆ ದಾಳಿ ಮಾಡಿದ ದುಷ್ಕರ್ಮಿಗಳು ಸಲ್ಮಾನ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.