ಬೆಂಗಳೂರು : ಕಾರು ಹತ್ತಿಸಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ.
ಬೆಂಗಳೂರಿನ ಜೆಪಿ ನಗರದಲ್ಲಿ ಈ ಭೀಕರ ಕೊಲೆ ನಡೆದಿದ್ದು, ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ.
ಆಸ್ಕರ್ ಎಂಬಾತನನ್ನು ಅಮ್ರಿನ್ ಎಂಬಾತ ಸ್ಕಾರ್ಪಿಯೋ ಕಾರಿನಿಂದ ಬೈಕ್ಗೆ ಡಿಕ್ಕಿ ಹೊಡೆಸಿ ಕೊಂದಿದ್ದಾನೆ. ಸ್ಪೀಡಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾನೆ. ಸೆಕೆಂಡ್ ಹ್ಯಾಂಡ್ ಕಾರು ಖರೀದಿ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ ಘಟನೆಯಲ್ಲಿ ಆಸ್ಕರ್ ಸ್ನೇಹಿತನಿಗೂ ಗಾಯಗಳಾಗಿದೆ.ಸದ್ಯ, ಪೊಲೀಸರು ಅಮ್ರೀನ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.