
ಬೆಂಗಳೂರು: ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ರಾಜ್ಯದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಆರವ್ ಹಾರ್ನಿ (31) ಬಂಧಿತ ಆರೋಪಿ. ನವೆಂಬರ್ .23ರಂದು ಆರವ್ ತನ್ನ ಪ್ರಿಯತಮೆ ಮಾಮಾ ಗೊಗೋಯ್ ಳನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.
ಬೆಂಗಳೂರಿನ ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಮಾಯಾ ಗೊಗೋಯ್ ಳನ್ನು ಪ್ರಿಯಕರ ಆರವ್ ಬರ್ಬರವಾಗಿ ಹತ್ಯೆಗೈದಿದ್ದ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರು ಹೊರ ರಾಜ್ಯದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.