ಬೆಂಗಳೂರು: ಬಳ್ಳಾರಿ, ಬೆಳಗಾವಿ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸಿದೆ. ಹೆರಿಗೆಯಾದ ಒಂದೇ ತಿಂಗಳಲ್ಲಿ ಬಾಣಂತಿ ಸಾವು ಪ್ರಕರಣದ ಬೆನ್ನಲ್ಲೇ ಇದೀಗ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ವಿನುತಿ ಮೃತ ಬಾಣಂತಿ. ನಿನ್ನೆ ಹೆರಿಗೆಗಾಗಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ವಿನುತಿ, ಸಂಜೆ ಮಗುವಿಗೆ ಜನ್ಮ ನೀಡಿದ್ದರು. ಬಳಿಕ ನಗರದ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಬಾಣಂತಿ ವಿನಿತಿ ಆಸ್ಪತೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ವೈದ್ಯರ ನಿರ್ಲಕ್ಷದಿಂದಲೇ ವಿನುತಿ ಸಾವನ್ನಪ್ಪಿದ್ದಾಗಿ ಕುಟುಂಬದವರು ಆರೋಪಿಸಿದ್ದಾರೆ.